Friday, September 12, 2025

ಸಿಟಿ ರವಿ , ಯತ್ನಾಳ್ ವಿರುದ್ದದ FIR: ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮದ್ದೂರಿನಲ್ಲಿ ಎಂಎಲ್‌ಸಿ ಸಿಟಿ ರವಿ ಹಾಗೂ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಪ್ರಚೋದನಕಾರಿ ಭಾಷಣ ಮಾಡಿದ್ರು ಅಂತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತಾಡಿದ ಅವರು,ಮದ್ದೂರು ಘಟನೆಯ ವಿಚಾರದಲ್ಲಿ ನಾವು ಮೊದಲಿಂದ ಹೇಳುತ್ತಿದ್ದೇವೆ. ಇದರಲ್ಲಿ ರಾಜಕೀಯ ಮಾಡಬೇಡಿ. ಪೊಲೀಸರಿಗೆ ಬಿಡಿ. ಕಲ್ಲು ಹೊಡೆದವರನ್ನು ಹಿಡಿದು, ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ. ಮುಸಲ್ಮಾನ ಆಗಿರಲಿ, ಹಿಂದು ಆಗಿರಲಿ, ಮತ್ತೊಬ್ಬ ಆಗಿರಲಿ, ಯಾರೇ ಕಾನೂನು ವಿರುದ್ಧವಾಗಿ ನಡೆದುಕೊಂಡಿದ್ದರೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ. ಈ ವಿಚಾರವನ್ನು ಪೊಲೀಸರಿಗೆ ಬಿಟ್ಟುಬಿಡಬೇಕು. ಅದೆಲ್ಲ ಬಿಟ್ಟು, ಇವರು ಹೋಗಿ ಪ್ರಚೋದನಾಕಾರಿಯಾಗಿ ಭಾಷಣ ಮಾಡಿ, ಮತ್ತೆ ಜನರನ್ನೆಲ್ಲ ಒಕ್ಕಲೆಬ್ಬಿಸುವುದು ಸರಿಯಲ್ಲ ಎಂದು ಹೇಳಿದರು.

ಯಾರು ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೋ, ಅಂಥವರ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಪರಮೇಶ್ವರ್‌ ಹೇಳಿದ್ದಾರೆ.

ಇದನ್ನೂ ಓದಿ