ಹೊಸದಿಗಂತ ಡಿಜಿಟಲ್ ಡೆಸ್ಕ್ :
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ವಿರುದ್ಧ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಕೋಲಾರ ಜಿಲ್ಲೆಯ ಮುಳಬಾಗಿಲು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕೊತ್ತೂರು ಅಂಜು ಬಾಸ್ ಅಲಿಯಾಸ್ ಆಂಜನೇಯಲು ವಿರುದ್ದ ಎಫ್‌ಐಆರ್ ದಾಖಲಾಗಿದೆ.
ಜಮೀನು ವ್ಯಾಜ್ಯ ಹಿನ್ನೆಲೆಯಲ್ಲಿ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಒಂದು ಎಕರೆ ಕ್ರಯ ಮಾಡಿಸಿಕೊಂಡು 2 ಎಕರೆಗೆ ಬೇಲಿ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅದನ್ನು ಪ್ರಶ್ನಿಸಿದ ಮಹಿಳೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆಂಬಲಿಗರಿಂದ ಧಮ್ಕಿ ಹಾಕಲಾಗಿದೆ ಎಂದು ಆರೋಪಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯ ವಿರುದ್ಧ ಪ್ರಕರಣ ದಾಖಲಾಗಿದೆ.