ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿಯ ಮುಖಂಡ ಸಿ.ಟಿ ರವಿ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಅದರ ಹೊರತಾಗಿ ಬೇರೇನೂ ಇಲ್ಲ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸಮರ್ಥನೆ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಿ.ಟಿ ರವಿ ಅವರ ಮಾತು ಕೇಳಿದ್ದೇನೆ. ತೊಡೆ ಮುರಿಯೋ, ತಲೆ ತೆಗೆಯೋದು ಅಂತೆಲ್ಲ ಮಾತನಾಡಿದ್ದಾರೆ. ಸಿ.ಟಿ ರವಿ ಅವರು ಸಚಿವರಾಗಿದ್ದವರು, ಶಾಸಕರು. ಅಂತವರ ಬಾಯಿಯಲ್ಲಿ ಇಂತಹ ಪದ ಬಳಕೆ ಸರಿನಾ ಎಂದು ಪ್ರಶ್ನಿಸಿದರು.
ಸಿ.ಟಿ ರವಿ ಅವರ ಮಾತುಗಳ ಬಗ್ಗೆ ಜನರೇ ತೀರ್ಮಾನ ಮಾಡಲಿ. ಹಾಗೆ ದ್ವೇಷ ಭಾಷಣ ಮಾಡಿದ್ದಕ್ಕೆ ಕೇಸ್ ಹಾಕಿದ್ದಾರೆ. ಅದರಲ್ಲಿ ತಪ್ಪೇನು ಎಂಬುದಾಗಿ ಎಫ್ಐಆರ್ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಸಮರ್ಥಿಸಿಕೊಂಡರು.