ಹೊಸದಿಗಂತ ಡಿಜಿಟಲ್ ಡೆಸ್ಕ್ :
ಮಂಡ್ಯ ಜಿಲ್ಲೆಯಲ್ಲಿ ನಡೆದ ಪ್ರಜಾಧ್ವನಿ ಯಾತ್ರೆ ವೇಳೆ ಕಲಾವಿದರತ್ತ ಹಣ ಎಸೆದ ಆರೋಪದ ಮೇಲೆ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮಂಡ್ಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗೋಪಾಲಕೃಷ್ಣ ಅವರು ಎಫ್ಐಆರ್ ದಾಖಲಾಗಿರುವ ಬಗ್ಗೆ ಮಾಹಿತಿ ನೀಡಿದ್ದು, ಸ್ಥಳೀಯ ಚುನಾವಣಾಧಿಕಾರಿಯೊಬ್ಬರು ಡಿಕೆ ಶಿವಕುಮಾರ್ ವಿರುದ್ಧ ಬುಧವಾರ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 155 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.