ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ನಡೆದ ಗಲಭೆ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಇಪ್ಪತ್ತಕ್ಕೂ ಹೆಚ್ಚು ರೈತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ರಾಮನಗರದ ಮಂಡಲಹಳ್ಳಿಯಲ್ಲಿ ಜೆಎಂಸಿ ಸರ್ವೆಗೆ ತಡೆಯೊಡ್ಡಿ ಕಂದಾಯ ಇಲಾಖೆ ಅಧಿಕಾರಿಗಳ ಮೇಲೆ ಹಲ್ಲೆನಡೆಸಿ, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ರೈತರ ವಿರುದ್ಧ ಬಿಡದಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬಿಡದಿ ಟೌನ್‌ಶಿಪ್ ಯೋಜನೆಯ ವ್ಯಾಪ್ತಿಗೆ ಬರುವ ಹಲವು ಗ್ರಾಮಗಳಲ್ಲಿ ಇಂದೂ ಕೂಡ ರೈತರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ. ಜಿಲ್ಲಾಡಳಿತ ಅಥವಾ ಅಧಿಕಾರಿಗಳು ಮತ್ತೆ ಜೆಎಂಸಿ ಸರ್ವೆಯನ್ನು ಮುಂದುವರಿಸಲು ಮುಂದಾದರೆ, ಸ್ಥಳದಲ್ಲೇ ತಡೆದು ತೀವ್ರ ಪ್ರತಿಭಟನೆ ನಡೆಸಲು ರೈತ ಸಂಘಟನೆಗಳು ಮತ್ತು ಸ್ಥಳೀಯರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.



