ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಡಿಜಿಪಿ ಚಂದ್ರಶೇಖರ್ ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬಿಎನ್ಎಸ್ ಅಂಡರ್ ಸೆಕ್ಷನ್ 224ರ ಅಡಿಯಲ್ಲಿ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಹೆಚ್ಡಿ ಕುಮಾರಸ್ವಾಮಿ ಆರೋಪಿ ನಂಬರ್ 1 ಆಗಿದ್ದಾರೆ. ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿ ನಂಬರ್ 2 ಆಗಿದ್ದಾರೆ. ಮತ್ತು ಜೆಡಿಎಸ್ ಮುಖಂಡ ಸುರೇಶ್ ಬಾಬು ಆರೋಪಿ ನಂಬರ್ 3 ಆಗಿದ್ದಾರೆ.
ಆರೋಪಿಗಳು ದುರುದ್ದೇಶ ಪೂರಿತವಾಗಿ ಆರೋಪ ಮಾಡಿದ್ದಾರೆ. ಮತ್ತು ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ಅವರು ದೂರಿನಲ್ಲಿ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಹೆಚ್ಡಿ ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯದ ಆದೇಶದಂತೆ ಎಫ್ಐಆರ್ ದಾಖಲಾಗಿದೆ.
ನಿಯಮ ಉಲ್ಲಂಘನೆ ಮಾಡಿ ಸಾಯಿ ಮಿನರಲ್ಸ್ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪದ ಮೇಲೆ ಹೆಚ್ಡಿ ಕುಮಾರಸ್ವಾಮಿ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಲೋಕಾಯುಕ್ತ ಎಸ್ಐಟಿ ಎಡಿಜಿಪಿ ಚಂದ್ರಶೇಖರ್ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದರು.