ಹೊಸದಿಗಂತ ಡಿಜಿಟಲ್ ಡೆಸ್ಕ್:
ಪತ್ನಿ ಒಬ್ಬಳೇ ವಾಕಿಂಗ್ ಗೆ ಹೋಗಿದ್ದಳೆಂದು ಆಕೆಗೆ ವ್ಯಕ್ತಿಯೋರ್ವ ತಲಾಖ್ ನೀಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ತ್ರಿವಳಿ ತಲಾಖ್ ನ್ನು 2019 ರಿಂದ ನಿಷೇಧಿಸಲಾಗಿದೆ. ನಿಷೇಧಿತ ತಲಾಖ್ ನ್ನು ಬಳಸಿದ್ದಕ್ಕಾಗಿ ವ್ಯಕ್ತಿಯ ವಿರುದ್ಧ ಥಾಣೆಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಮುಂಬ್ರಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪತ್ನಿಯ ತಂದೆಗೆ ಕರೆ ಮಾಡಿದ ವ್ಯಕ್ತಿ, ತಾನು ತ್ರಿವಳಿ ತಲಾಖ್ ನೀಡುವ ಮೂಲಕ ವಿಚ್ಛೇದನ ನೀಡುತ್ತಿರುವುದಾಗಿ ಹೇಳಿದ್ದಾರೆ.
ಪತ್ನಿ ಒಬ್ಬಳೇ ವಾಕಿಂಗ್ ಗೆ ಹೋಗಿದ್ದೇ ತಾನು ತ್ರಿವಳಿ ತಲಾಖ್ ನೀಡುತ್ತಿರುವುದಕ್ಕೆ ಕಾರಣ ಎಂದು ವ್ಯಕ್ತಿ ತಿಳಿಸಿದ್ದಾನೆ. ಆತನ ಪತ್ನಿಯ ದೂರಿನ ಮೇರೆಗೆ ಪೊಲೀಸರು ಬುಧವಾರ ಪುರುಷನ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 351(4) ಅಡಿಯಲ್ಲಿ ಕ್ರಿಮಿನಲ್ ಬೆದರಿಕೆ ಮತ್ತು ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದಾರೆ.