Tuesday, May 30, 2023

Latest Posts

ಮತದಾರರಿಗೆ ಆಮಿಷ ಆರೋಪ : ಶಾಸಕ ಶಾಮನೂರು ಮತ್ತು ಪುತ್ರನ ವಿರುದ್ಧ ಎಫ್‌ಐಆರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯ ವಿಧಾನಸಭೆ ಚುನಾವಣೆಯ ದಿನಾಂಕ ನಿನ್ನೆ ಘೋಷಣೆಯಾಗಿದ್ದು, ನೀತಿ ಸಂಹಿತೆ ಜಾರಿಯಾಗಿದೆ. ಹೀಗಿದ್ದರೂ ಕೂಡ ಮತದಾರರಿಗೆ ಆಮಿಷವೊಡ್ಡಿ ಗಿಫ್ಟ್ ಹಂಚುತ್ತಿದ್ದ ಆರೋಪದಡಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಅವರ ಪುತ್ರ ಜೊತೆಗೆ ದಾವಣಗೆರೆ ಉತ್ತರ ಕ್ಷೇತ್ರದ ಮಾಜಿ ಶಾಸಕರಾಗಿರುವ ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ದ ಎಫ್‌ಐಆರ್ ದಾಖಲಾಗಿದೆ.

ಚುನಾವಣೆಯ ಹಿನ್ನೆಲೆ ಅಕ್ರಮಗಳಿಗೆ ಕಡಿವಾಣ ಹಾಕಲು‌ ಕೇಂದ್ರ ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ದಾವಣಗೆರೆಯಲ್ಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ವಿರುದ್ಧ ಅಕ್ರಮವಾಗಿ ಅಡುಗೆ ಉಪಕರಣ ಹಂಚಿದ ಆರೋಪದ ಮೇಲೆ ಕೆ.ಟಿ.ಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!