ಸಂಸದ ಅನಂತ್‌ ಕುಮಾರ್‌ ಹೆಗಡೆ ವಿರುದ್ಧ FIR

ಹೊಸದಿಂಗತ ಡಿಜಿಟಲ್ ಡೆಸ್ಕ್:

ಉತ್ತರ ಕನ್ನಡ ಸಂಸದ ಅನಂತ್‌ ಕುಮಾರ್‌ ಹೆಗಡೆ ಅವರು ಲೋಕಸಭೆ ಚುನಾವಣೆಗಳ ಸಮಯದಲ್ಲಿ ಪ್ರಚೋದನಾತ್ಮಕ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ನಿಂದಿಸಿದ್ದರು.

ಈ ಭಾಷಣ ಭಾರಿ ವಿವಾದಗಳನ್ನು ಎಬ್ಬಿಸಿದ್ದು, ಉತ್ತರ ಕನ್ನಡ ಸಂಸದರಿಗೆ ಕೊಂಚ ವಿರುದ್ಧವಾಗಿದ್ದು ಕುಮಟಾ ಪೊಲೀಸರು ಈ ವಿಷಯದಲ್ಲಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ.

ಕುಮಟಾ ಠಾಣೆಯಲ್ಲಿ ಸ್ವಯಂ ದೂರು ದಾಖಲಿಸಿಕೊಂಡ ಪೊಲೀಸರು, ದ್ವೇಷ ಭಾಷಣ ಹಾಗೂ ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಯತ್ನಿಸಿದ್ದಾಗಿ ಎಫ್‌ಐಆರ್‌ ಉಲ್ಲೇಖಿಸಿದ್ದಾರೆ.

ಈ ಪ್ರಕರಣವು ಸೆಕ್ಷನ್ 505 ಮತ್ತು 153ಎ ಅಡಿಯಲ್ಲಿ ದಾಖಲಾಗಿದೆ ಮತ್ತು ಸಂಸದರ ಹೇಳಿಕೆಯು ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಈಗ ಕಾಂಗ್ರೆಸ್ ಮುಖಂಡರು ಸಂಸದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾರ್ಯಕರ್ತರಿಂದ ಆಗ್ರಹಗಳು ಕೇಳಿ ಬಂದಿದ್ದವು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!