ಬಹುಭಾಷಾ ಗಾಯಕ ಸೋನು ನಿಗಮ್ ವಿರುದ್ಧ ಎಫ್ಐಆರ್: ಕಾರಣವೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಬಹುಭಾಷಾ ಗಾಯಕ ಸೋನು ನಿಗಮ್ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದೆ.

ಕರ್ನಾಟಕ ರಕ್ಷಣಾ ವೇದಿಕೆ ನೀಡಿದ ದೂರಿನ ಮೇರೆಗೆ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂಬುದಾಗಿ ತಿಳಿದು ಬಂದಿದೆ.

ಸೆಕ್ಷನ್ 352 ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಸೋನು ನಿಗಮ್ ಅವರು ಕನ್ನಡ ಮತ್ತು ಕನ್ನಡಿಗರ ಭಾಷಾ ಹೋರಾಟವನ್ನು ಭಯೋತ್ಪಾದನೆಗೆ ಹೋಲಿಸಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕೆಆರ್ವಿ) ಬೆಂಗಳೂರು ಪೊಲೀಸರಿಗೆ ಔಪಚಾರಿಕ ದೂರು ನೀಡಿದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!