March 25, 2026
Wednesday, March 25, 2026
spot_img

ಸ್ಕ್ಯಾನಿಂಗ್‌ಗೆ ಬಂದ ಹೆಣ್ಣುಮಕ್ಕಳ ಖಾಸಗಿ ಅಂಗಕ್ಕೆ ಕೈ ಹಾಕಿದ ರೇಡಿಯಾಲಜಿಸ್ಟ್‌ ವಿರುದ್ಧ ಎಫ್‌ಐಆರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸ್ಕ್ಯಾನಿಂಗ್‌ಗೆ ಬಂದ ಹೆಣ್ಣು ಮಕ್ಕಳ ಖಾಸಗಿ ಅಂಗ ಮುಟ್ಟಿ ರೆಡಿಯಾಲಜಿಸ್ಟ್ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ನಡೆದಿದೆ.

ಆನೇಕಲ್ ಪಟ್ಟಣದ ಸ್ಕ್ಯಾನಿಂಗ್‌ ಸೆಂಟರ್‌ನಲ್ಲಿ ರೆಡಿಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ಜಯಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಇತ್ತೀಚಿಗೆ ಮಹಿಳೆಯೋರ್ವರು ಹೊಟ್ಟೆ ನೋವೆಂದು ಪತಿಯೊಂದಿಗೆ ಸ್ಕ್ಯಾನಿಂಗ್‌ ಸೆಂಟರ್‌ಗೆ ಆಗಮಿಸಿದ್ದರು. ಈ ವೇಳೆ ಸ್ಕ್ಯಾನಿಂಗ್‌ ಮಾಡುವಾಗ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಜೊತೆಗೆ ಖಾಸಗಿ ಅಂಗಗಳಿಗೆ ಕೈ ಹಾಕಿ, ಕಾಮಾಂಧ ಡಾಕ್ಟರ್ ವಿಕೃತಿ ಮೆರೆದಿದ್ದಾನೆ. ಮಹಿಳೆ ವಿರೋಧ ವ್ಯಕ್ತಪಡಿಸಿದಾಗ ಬೆದರಿಕೆ ಹಾಕಿ, ಈ ವಿಚಾರ ಹೊರಗೆ ಬಾಯ್ಬಿಡದಂತೆ ಮಹಿಳೆಗೆ ಧಮ್ಕಿ ಹಾಕಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿ, ಸಾಯಿಸೋದಾಗಿ ಬೆದರಿಕೆ ಹಾಕಿದ್ದಾನೆ.

ಈ ಘಟನೆಯನ್ನು ಮಹಿಳೆ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ಕೂಡಲೇ ಮಹಿಳೆ ಆನೇಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ ಪೊಲೀಸರು ಆರೋಪಿ ಜಯಕುಮಾರ್‌ನನ್ನು ಈವರೆಗೆ ಬಂಧಿಸಿಲ್ಲ. ಬದಲಾಗಿ ಠಾಣೆಗೆ ಕರೆಸಿ, ಬಿಟ್ಟುಕಳುಹಿಸಿದ್ದಾರೆ ಎನ್ನಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !