Saturday, December 9, 2023

Latest Posts

SHOCKING | ಬಿಎಂಟಿಸಿಯ ಏಳು ಅಧಿಕಾರಿಗಳ ವಿರುದ್ಧ ಎಫ್‌ಐಆರ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿರಿಯ ಅಧಿಕಾರಿಗಳ ಹೆಸರಲ್ಲಿ ನಕಲು ಸಹಿ ಮಾಡಿ ಕೋಟಿ ಕೋಟಿ ಹಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಟಿಸಿಯ ಏಳು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಈ ಬಗ್ಗೆ ಅಸಿಸ್ಟೆಂಟ್ ಸೆಕ್ಯುರಿಟಿ ಆಂಡ್ ವಿಝಿಲೆನ್ಸ್ ಅಧಿಕಾರಿ ಸಿ.ಕೆ. ರಮ್ಯಾ ಅವರು ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈಗಾಗಲೇ ಏಳೂ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಓರ್ವ ಅಧಿಕಾರಿಯನ್ನು ಬಂಧಿಸಲಾಗಿದೆ.

ಬಿಎಂಟಿಸಿಯ ಮಾಜಿ ಎಂಡಿ ಶಿಖಾ ಹಾಗೂ ಭದ್ರತಾ ಜಾಗೃತ ದಳದ ನಿರ್ದೇಶಕ ಅರುಣ್ ಕೆ. ಅವರ ಸಹಿಗಳನ್ನು ಕಲರ್ ಝೆರಾಕ್ಸ್ ಮಾಡುವ ಮೂಲಕ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ.

ಈ ಸಹಿ ಬಳಸಿ ಕೋಟಿ ಕೋಟಿ ರೂಪಾಯಿ ವಂಚನೆ ಮಾಡಿದ್ದು,ಪ್ರಮುಖ ಆರೋಪಿ ಶ್ರೀರಾಮ್ ಮುಲ್ಕಾವನ್ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಅಧಿಕಾರಿಗಳು ಒಟ್ಟಾರೆ ೧೭ ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!