October 9, 2026
Friday, October 9, 2026
spot_img

ಪಬ್‌ನಲ್ಲಿ ಮಹಿಳಾ ಸಿಬ್ಬಂದಿಗೆ ಕಿರುಕುಳ ಆರೋಪ: ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ವಿರುದ್ಧ FIR

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಗರದ ಪಬ್‌ನಲ್ಲಿ ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡಿದ, ಬಿಲ್ ಪಾವತಿಸಲು ನಿರಾಕರಿಸಿದ ಹಾಗೂ ಬಳಿಕ ಜೀವ ಬೆದರಿಕೆ ಹಾಕಿದ ಆರೋಪದಡಿ ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ಮಂಜು ಅಲಿಯಾಸ್ ಅಮುಕು ಡುಮುಕು ಸೇರಿ ಹಲವರ ವಿರುದ್ಧ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಿರುಕುಳ ಮತ್ತು ಬಿಲ್ ವಿವಾದ

ಜುಲೈ 9ರಂದು ರಾತ್ರಿ ಪಬ್‌ಗೆ ಬಂದ ಆರೋಪಿ ಆಹಾರ ಮತ್ತು ಮದ್ಯ ಸೇವಿಸಿದ ಬಳಿಕ ಬಿಲ್ ಪಾವತಿಸಲು ನಿರಾಕರಿಸಿದ್ದಾನೆ ಎನ್ನಲಾಗಿದೆ. ಇದೇ ವೇಳೆ ಮಹಿಳಾ ಸಿಬ್ಬಂದಿಯೊಬ್ಬರೊಂದಿಗೆ ಅನುಚಿತವಾಗಿ ವರ್ತಿಸಿ, ಅವಹೇಳನಕಾರಿ ಮಾತುಗಳನ್ನಾಡಿದ ಆರೋಪ ಕೇಳಿಬಂದಿದೆ.

ಇದನ್ನೂ ಓದಿ:

ಸೆಲ್ಫಿಗೆ ಒತ್ತಾಯ, ಬೆದರಿಕೆ ಆರೋಪ

ಮತ್ತೊಬ್ಬ ಮಹಿಳಾ ಸಿಬ್ಬಂದಿಗೆ ಸೆಲ್ಫಿ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಲ್ಲದೆ, ನಿರಾಕರಿಸಿದಾಗ ನಿಂದನೆ ಮಾಡಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಕುರಿತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಬಳಿಕ, ಪಬ್ ವ್ಯವಸ್ಥಾಪಕರಿಗೆ ಕರೆ ಮಾಡಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿರುವ ಆರೋಪವೂ ಕೇಳಿಬಂದಿದೆ.

ಪ್ರಕರಣ ದಾಖಲು, ತನಿಖೆ ಮುಂದುವರಿಕೆ

ಈ ಸಂಬಂಧ ಲೈಂಗಿಕ ಕಿರುಕುಳ, ಕ್ರಿಮಿನಲ್ ಬೆದರಿಕೆ ಸೇರಿದಂತೆ ವಿವಿಧ ಆರೋಪಗಳಡಿ ಇನ್‌ಫ್ಲುವೆನ್ಸರ್, ಅವರ ತಾಯಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು ನೋಟಿಸ್ ಜಾರಿ ಮಾಡಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.

Must Read