ಮೇಕೆದಾಟು ಪಾದಯಾತ್ರೆ: 64 ಕಾಂಗ್ರೆಸ್‌ ನಾಯಕರ ಮೇಲೆ ಎಫ್‌ ಐಆರ್ ದಾಖಲು

ಹೊಸದಿಗಂತ ವರದಿ, ರಾಮನಗರ:

ಮೇಕೆದಾಟು ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್‌ ನಡೆಸುತ್ತಿರುವ ಪಾದಯಾತ್ರೆ 4ನೇ ದಿನಕ್ಕೆ ಕಾಲಿಟ್ಟಿದೆ.
ಈ ಪಾದಯಾತ್ರೆಯ ನೇತೃತ್ವ ವಹಿಸಿದ್ದ 64 ನಾಯಕರ ವಿರುದ್ದ ಕನಕಪುರ ಟೌನ್ ಪೊಲೀಸ್‌ ಠಾಣೆಯಲ್ಲಿ 3ನೇ ಎಫ್​ಐಆರ್ ದಾಖಲಾಗಿದೆ.
ಕೆಪಿಸಿಸಿ ನಾಯಕ ಡಿ.ಕೆ. ಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಸುರೇಶ್, ಎಸ್. ರವಿ, ಧ್ರುವನಾರಾಯಣ, ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು ಸೇರಿ ಇತರ ಮುಖಂಡರ ಮೇಲೆ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.
ಕಾಂಗ್ರೆಸ್‌ ನಾಯಕರು ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ಇಂದು ಚಿಕ್ಕೇನಹಳ್ಳಿಯಿಂದ ರಾಮನಗರ ಟೌನ್‌ ವರೆಗೂ ನಡೆಯಲಿದೆ. ಮೂರು ಎಫ್‌ ಐಆರ್‌ ದಾಖಲಾಗಿದ್ದರೂ ಕ್ಯಾರೇ ಎನ್ನದೆ ಪಾದಯಾತ್ರೆ ಮುಂದುವರಿಸಿದ್ದಾರೆ.
ಈಗಾಗಲೇ ಸಾತನೂರು ಠಾಣೆಯಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಮಧ್ಯೆ ಗೃಹ ಸಚಿವರು ಕೂಡ ಎಚ್ಚರಿಕೆ ಕೊಟ್ಟಿದ್ದಾರೆ. ಅಷ್ಟೇ ಅಲ್ಲದೆ ಪಾದಯಾತ್ರೆ ಬಳಿಕ ಕಾದು ನೋಡಿ ಏನು ಮಾಡುತ್ತೇವೆ ಅಂತ ಸಚಿವ ಡಾ. ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಇದಕ್ಕೆ ತಲೆಕೆಡಿಸಿಕೊಳ್ಳದ ನಾಯಕರು ಪಾದಯಾತ್ರೆ ಮುಂದುವರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!