Monday, October 2, 2023

Latest Posts

ಸಾವಿತ್ರಿ ಬಾಯಿ ಫುಲೆ ವಿರುದ್ಧ ಆಕ್ಷೇಪಾರ್ಹ ಪೋಸ್ಟ್:‌ ವೆಬ್‌ಸೈಟ್‌ಗಳ ವಿರುದ್ಧ ಎಫ್‌ಐಆರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಸಮಾಜ ಸುಧಾರಕಿ ಸಾವಿತ್ರಿ ಬಾಯಿ ಫುಲೆ ವಿರುದ್ಧ ಅವಹೇಳನಕಾರಿ ವಿಷಯವನ್ನು ಪ್ರಕಟಿಸಿದ ಆರೋಪದ ಮೇಲೆ ಎರಡು ವೆಬ್‌ಸೈಟ್‌ಗಳ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

“ಇಂಡಿಕ್ ಟೇಲ್ಸ್ ಮತ್ತು ಹಿಂದುಪೋಸ್ಟ್ ವೆಬ್‌ಸೈಟ್‌ಗಳು ಸಾವಿತ್ರಿ ಬಾಯಿ ಫುಲೆ ವಿರುದ್ಧ ಅವಹೇಳನಕಾರಿ ವಿಷಯವನ್ನು ಪ್ರಕಟಿಸಿವೆ ಎಂದು ಆರೋಪಿಸಲಾಗಿದೆ. ಭಾರತೀಯ ದಂಡ ಸಂಹಿತೆಯ (IPC) 500 ಮತ್ತು 505 (2) ಸೆಕ್ಷನ್‌ಗಳ ಅಡಿಯಲ್ಲಿ ಆಜಾದ್ ಮೈದಾನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ” ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಈ ವೆಬ್‌ಸೈಟ್‌ಗಳ ವಿರುದ್ಧ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕರು ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ.

ಎನ್‌ಸಿಪಿ ನಾಯಕರು ಮುಂಬೈ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ದೂರು ದಾಖಲಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!