Tuesday, October 3, 2023

Latest Posts

ನಟಿ ನವ್ಯಾ ನಾಯರ್ ವಿರುದ್ಧ ಎಫ್ ಐ ಆರ್ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ನವ್ಯಾ ನಾಯರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ನಟಿ ನವ್ಯಾ ನಾಯರ್ ವಿರುದ್ಧ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.
ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಬಂಧಿಸಲ್ಪಟ್ಟ ಐಆರ್ ಎಸ್ ಅಧಿಕಾರಿ ಸಚಿನ್ ಸಾವಂತ್ ಅವರೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದ ನವ್ಯಾ , ಅಧಿಕಾರಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಉಡುಗೊರೆ, ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.ಈ ಹಿನ್ನೆಲೆಯಲ್ಲಿ ಇಡಿ ತನಿಖೆ ನಡೆಸಿದ್ದು, ನವ್ಯಾ ನಾಯರ್ ಅಧಿಖಾರಿಯಿಂದ ಹಣ, ಚಿನ್ನಾಭರಣ ಪಡೆದಿರುವುದು ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನವ್ಯಾ ನಾಯರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಅಧಿಕಾರಿ ಸಚಿನ್ ವಿಚಾರಣೆ ವೇಳೆ ಅವರ ವಾಟ್ಸಪ್ ನಿಂದಾಗಿ ನಟಿ ನವ್ಯಾ ನಾಯರ್ ಜೊತೆ ಆತ್ಮೀಯರಾಗಿದ್ದ ವಿಷಯ ಬೆಳಕಿಗೆ ಬಂದಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!