ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ರಾಜ್ಯೋತ್ಸವ ದಿನದಂದು ಬೆಳಗಾವಿಯಲ್ಲಿ ಕರಾಳ ದಿನವನ್ನು ಆಚರಿಸಿದ ಎಂ.ಇ.ಎಸ್ ಪುಂಡರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಕನ್ನಡ ರಾಜ್ಯೋತ್ಸವ ದಿನದಂದು ಗಡಿ ಜಿಲ್ಲೆ ಬೆಳಗಾವಿಗೆ ನುಗ್ಗಿದ್ದ ಎಂಇಎಸ್ ಪುಂಡರು ನಿಷೇಧದ ನಡುವೆಯೂ ಕರಾಳ ದಿನಾಚರಣೆ ಮಾಡಿದ್ದರು. ಈ ವೇಳೆ ನಾಡದ್ರೋಹಿ ಘೋಷಣೆ ಕೂಗಿದ್ದ 18 ಮಂದಿ ವಿರುದ್ಧ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕರಾಳ ದಿನಾಚರಣೆಗೆ ಅವಕಾಶವಿಲ್ಲ, ಮಹಾರಾಷ್ಟ್ರ ನಾಯಕರಿಗೆ ಬೆಳಗಾವಿ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. ಆದರೂ ಎಂ.ಇ.ಎಸ್ ಕಾರ್ಯಕರ್ತರು ಜಿಲ್ಲೆಯಲ್ಲಿ ಪುಂಡಾಟ ಮೆರೆದು, ಕರಾಳ ದಿನಾಚರಣೆ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ನಾಡದ್ರೋಹಿ ಘೋಷಣೆ ಕೂಗಿದ ಎಂ.ಇ.ಎಸ್ ನ ಮಾಲೋಜಿರಾವ್ ಅಷ್ಟೇಕರ್, ಮನೋಹರ ಕಿಣೇಕರ್, ರಂಜಿತ್ ಚವ್ಹಾಣ್, ಸರಿತಾ ಪಾಟೀಲ್, ಸಾರಿಕಾ ಪಾಟೀಲ, ಅಂಕುಶ ಕೇಸರಕರ್ ಸೇರಿದಂತೆ 18 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.