ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ FIR ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದೆ.

ಸಂತ್ರಸ್ತ ನೀಡಿದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377 , 342 ಹಾಗೂ 506 ರಡಿ ಕೇಸ್ ದಾಖಲು ಮಾಡಲಾಗಿದೆ.

ಆರೋಪಕ್ಕೆ ಸಂಬಂಧಿಸಿದಂತೆ ಶುಕ್ರವಾರ ಡಿಜಿ ಕಚೇರಿಯಲ್ಲಿ ಸಂತ್ರಸ್ತ ದೂರು ನೀಡಿದ್ದರು. ಅಲ್ಲದೇ ಹಾಸನ ಎಸ್ಪಿಗೂ ದೂರಿನ ಪ್ರತಿ ಮೇಲ್ ಮಾಡಿದ್ದ. ಈ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದ್ದಂತೆ ಮೇಲ್ ಆಧರಿಸಿ ಸಂತ್ರಸ್ತನನ್ನ ಕರೆಸಿ ಮಾಹಿತಿ ಪಡೆದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!