Sunday, January 11, 2026

ಕೆಲಸ ಪಡೆಯೋಕ್ಕಾಗಿ ಪಾಕ್‌ ರಾಷ್ಟ್ರೀಯತೆ ಮುಚ್ಚಿಟ್ಟಿದ್ದ ಶಿಕ್ಷಕಿ ವಿರುದ್ಧ ಎಫ್‌ಐಆರ್‌ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶಿಕ್ಷಣ ಇಲಾಖೆಯಲ್ಲಿ ಕೆಲಸ ಗಿಟ್ಟಿಸಿಕೊಳ್ಳಲು ಪಾಕಿಸ್ತಾನಿ ರಾಷ್ಟ್ರೀಯತೆ ಮುಚ್ಚಿಟ್ಟಿದ್ದ ಉತ್ತರ ಪ್ರದೇಶದ ಮಹಿಳೆ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಪೊಲೀಸರು ಹೇಳುವಂತೆ, ಮಹಿರಾ ಅಖ್ತರ್ ಅಲಿಯಾಸ್ ಫರ್ಜಾನಾ ನಕಲಿ ದಾಖಲೆಗಳನ್ನ ಬಳಸಿ ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ ಅನ್ನೋದು ಶಿಕ್ಷಣ ಇಲಾಖೆಯ ಆಂತರಿಕ ತನಿಖೆಯಲ್ಲಿ ತಿಳಿದುಬಂದಿದೆ. ಬಳಿಕ ಇಲಾಖೆಯ ದೂರಿನ ಮೇರೆಗೆ ಅಜೀಮ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿ ಮಹಿಳೆ ಕುಮ್ಹರಿಯಾ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಆಕೆ ಪಾಕಿಸ್ತಾನಿ ಪ್ರಜೆಯಾಗಿದ್ದರೂ ನಕಲಿ ವಾಸಸ್ಥಳ ಪ್ರಮಾಣ ಪತ್ರ ಬಳಸಿಕೊಂಡು ಕೆಲಸ ಪಡೆದಿದ್ದಳು. ಇದೀಗ ವಂಚನೆ ಮತ್ತು ನಕಲಿ ದಾಖಲೆ ಸಲ್ಲಿಕೆ ಆರೋಪಗಳಿಗಾಗಿ ಬಿಎನ್‌ಎಸ್ ಸೆಕ್ಷನ್ 318(4), 336, 338 ಮತ್ತು 340 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಸಿಂಗ್ ಹೇಳಿದ್ದಾರೆ.

error: Content is protected !!