ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಬಾರ್ & ರೆಸ್ಟೋರೆಂಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಪ್ರತ್ಯೇಕ ಸ್ಥಳ ಮೀಸಲಿಡದೆ ಧೂಮಪಾನಕ್ಕೆ ಅವಕಾಶ ನೀಡಿದ್ದಕ್ಕಾಗಿ ಬೆಂಗಳೂರಿನ ಕಸ್ತೂರ್‌ಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್ ಬಾರ್ & ರೆಸ್ಟೋರೆಂಟ್‌ನ ಮ್ಯಾನೇಜರ್ ಹಾಗೂ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಮೇ 29ರಂದು ಕಬ್ಬನ್ ಪಾರ್ಕ್ ಪೊಲೀಸರು ಬಾರ್ ಮೇಲೆ ದಾಳಿ ಮಾಡಿ, ಸ್ವಯಂಪ್ರೇರಿತವಾಗಿ NCR ದಾಖಲಿಸಿಕೊಂಡಿದ್ದರು. ಇದೀಗ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.