ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮದ್​ ನಲಪಾಡ್ ವಿರುದ್ಧ ಎಫ್​ಐಆರ್ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮದ್​ ನಲಪಾಡ್ ವಿರುದ್ಧ ಎಫ್​ಐಆರ್ ದಾಖಲಾಗಿದೆ.
ಕೋರ್ಟ್ ಆದೇಶ ಉಲ್ಲಂಘಿಸಿ ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್ ಅಳವಡಿಸಿದ್ದ ಆರೋಪದ ಮೇಲೆ ಹಲಸೂರು ಗೇಟ್ ಠಾಣೆಯಲ್ಲಿ ಫ್ಲೆಕ್ಸ್ ವಿಚಾರಕ್ಕೆ ಎರಡು ದೂರು ದಾಖಲಾಗಿತ್ತು. ಈ ಹಿನ್ನೆಲೆ ಎಫ್​ಐಆರ್ ದಾಖಲಾಗಿದೆ.
ಬಿಬಿಎಂಪಿ ಕಂದಾಯ ಅಧಿಕಾರಿ ನೀಡಿದ ದೂರಿನ ಮೇರೆಗೆ ಮೊಹಮದ್ ನಲಪಾಡ್ ಮೇಲೆ ಪ್ರಕರಣ ದಾಖಲಾಗಿದೆ.
ಟೌನ್‌ ಹಾಲ್ ಮುಂಭಾಗ ಕಾರ್ಪೊರೇಷನ್ ಸರ್ಕಲ್ ವ್ಯಾಪ್ತಿಯಲ್ಲಿ ಬಿ ಕೆ ಹರಿಪ್ರಸಾದ್ ಅಭಿನಂದನಾ ಕಾರ್ಯಕ್ರಮಕ್ಕೆ 150ಕ್ಕೂ ಹೆಚ್ಚು ಅನಧಿಕೃತ ಫ್ಲೆಕ್ಸ್ ನಲಪಾಡ್ ಅಂಡ್ ಟೀಮ್ ಅಳವಡಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!