ಹೊಸದಿಗಂತ ಡಿಜಿಟಲ್ ಡೆಸ್ಕ್:
ವೆಬ್‌ಸಿರೀಸ್‌ನ ಒಂದು ಸಂಭಾಷಣೆ ಇದೀಗ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ಅವರಿಗೆ ಸಂಕಷ್ಟ ತಂದೊಡ್ಡಿದೆ.
ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದಾರೆ ಎಂಬ ಆರೋಪದ ಮೇಲೆ ಚಂಡೀಗಢ ಪೊಲೀಸರು ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಭಾರೀ ಚರ್ಚೆಗೆ ಕಾರಣವಾಗಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ ಯೋಗರಾಜ್ ಸಿಂಗ್ ಪೊಲೀಸ್ ಠಾಣೆಯ ದೃಶ್ಯದಲ್ಲಿ ಅಧಿಕಾರಿಗಳ ಜೊತೆ ಮಾತನಾಡುತ್ತಿರುವುದು ಕಾಣಿಸಿಕೊಂಡಿದೆ. ಇದೇ ವೇಳೆ ಅವರು ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಮಾತುಗಳನ್ನು ಆಡಿದ್ದಾರೆ ಎನ್ನಲಾಗಿದ್ದು, ಹಲವರು ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಗಮನಕ್ಕೆ ಬಂದ ತಕ್ಷಣ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ:
ಚಂಡೀಗಢದ ಸೆಕ್ಟರ್-36 ಪೊಲೀಸ್ ಠಾಣೆಯಲ್ಲಿ ಯೋಗರಾಜ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ವಿಚಾರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಯೋಗರಾಜ್ ಸಿಂಗ್ ಈ ಹಿಂದೆಯೂ ಹಲವು ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಾಗಿದ್ದರು. ವಿಶೇಷವಾಗಿ ಮಹೇಂದ್ರ ಸಿಂಗ್ ಧೋನಿ ವಿರುದ್ಧ ಟೀಕೆ ಮಾಡಿ ಅವರು ಸಾಕಷ್ಟು ವಿವಾದ ಸೃಷ್ಟಿಸಿದ್ದರು.



