ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಬಿತ್ತುವ ಪೋಸ್ಟ್‌: ಬಿಜೆಪಿ ಮುಖಂಡ ಸಿ.ಟಿ. ರವಿ ವಿರುದ್ಧ ಎಫ್‌ಐಆರ್‌ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಬಿತ್ತುವ ಹೇಳಿಕೆ ನೀಡಿರುವ ಆರೋಪದಲ್ಲಿ ಬಿಜೆಪಿ ಮುಖಂಡ ಸಿ.ಟಿ. ರವಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣ ಮೇಲ್ವಿಚಾರಣಾ ಸಮಿತಿಯ ನೋಡಲ್ ಅಧಿಕಾರಿಯ ಸೂಚನೆ ಮೇರೆಗೆ ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಕೆ.ಜಯಲಕ್ಷ್ಮಮ್ಮ ನಗರ ಠಾಣೆಗೆ ದೂರು ನೀಡಿ ಎಫ್‌ಐಆರ್ ದಾಖಲಿಸಿದ್ದಾರೆ.

ಮೇಲ್ನೋಟಕ್ಕೆ ರವಿ ಅವರ ಬರಹ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿರುವಂತೆ ಕಾಣುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗ ಜಿಲ್ಲಾ ಚುನಾವಣಾಧಿಕಾರಿಗೆ ಸೂಚನೆ ನೀಡಿತ್ತು.

ಸಿ ಟಿ ರವಿ ತಮ್ಮ ಎಕ್ಸ್‌ ಖಾತೆಯಲ್ಲಿ “ಸಾಗರಗಳ ಆಳವನ್ನು ಅಳೆಯಬಹುದು. ಹಿಂದೂ ಮತ್ತು ಹಿಂದೂ ಧರ್ಮದ ವಿರುದ್ಧ ರಾಹುಲ್ ಗಾಂಧಿ ದ್ವೇಷವನ್ನು ಎಂದಿಗೂ ಕಂಡು ಹಿಡಿಯಲಾಗುವುದಿಲ್ಲ. ಹಿಂದೂ ಧರ್ಮದಲ್ಲಿ ಶಕ್ತಿ ಎಂಬ ಪದವಿದೆ, ನಮ್ಮ ಹೋರಾಟ ಶಕ್ತಿ ವಿರುದ್ಧ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ದುಷ್ಟ ಶಕ್ತಿಗಳ ದಾಳಿಯಿಂದ ನಮ್ಮ ಧರ್ಮವನ್ನು ರಕ್ಷಿಸಲು ಹಿಂದೂಗಳು ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ನಿರ್ದಯವಾಗಿ ತೆಗೆದು ಹಾಕಬೇಕು” ಎಂದು ಪೋಸ್ಟ್ ಹಾಕಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!