Saturday, June 10, 2023

Latest Posts

ನಿತಿನ್ ಗಡ್ಕರಿಗೆ ಕೊಲೆ ಬೆದರಿಕೆ ಪ್ರಕರಣ: ಎನ್‌ಐಎಯಿಂದ ಎಫ್‌ಐಆರ್ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬಂದಿರುವ ಕೊಲೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಕೊಲೆ ಪ್ರಕರಣವೊಂದರಲ್ಲಿ ಬೆಳಗಾವಿಯ ಹಿಂಡಲಗಾ ಜೈಲು ಸೇರಿದ್ದ ಜ್ಞಾನೇಶ್ ಪೂಜಾರಿ ಎಂಬ ಆರೋಪಿ, ಮಾ.21ರಂದು ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಸಚಿವರ ಕಚೇರಿಗೆ ಕರೆ ಮಾಡಿ ನಿತಿನ್ ಗಡ್ಕರಿಯವರಿಗೆ ಜೀವ ಬೆದರಿಕೆ ಹಾಕಿದ್ದ. ಅಲ್ಲದೇ ಈ ಹಿಂದೆ ಜ.14ರಂದು ಸಚಿವರ ಕಚೇರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕುವುದರ ಜತೆಗೆ 10 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ. ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಬೆಳಗಾವಿ ಜೈಲಿನ ಬಗ್ಗೆ ಮಾಹಿತಿ ಬಹಿರಂಗವಾಗಿದೆ.

ದಾವೂದ್ ಇಬ್ರಾಹಿಂ ಗ್ಯಾಂಗ್​ನ ಸದಸ್ಯ ಎಂದು ಹೇಳಿ ನಿತಿನ್ ಗಡ್ಕರಿಗೆ ಕೊಲೆ ಬೆದರಿಕೆ ಹಾಕಿದ್ದ. ಈ ಹಿನ್ನೆಲೆಯಲ್ಲಿ ಎನ್​​​ಐಎ ಅಧಿಕಾರಿಗಳು ಆತನ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಎಫ್‌ಐಆರ್ ಮಾಹಿತಿ ರವಾನಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!