ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯಲ್ಲಿ ಎಫ್​ಐಆರ್ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿದೆ.

ಹಾವೇರಿಯಲ್ಲಿ ರೈತನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಹಾವೇರಿಯ ಸಿಇಎನ್ ಠಾಣೆಯಲ್ಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ರೈತ ರುದ್ರಪ್ಪ ಆತ್ಮಹತ್ಯೆಗೆ ವಕ್ಸ್ ನೋಟಿಸ್ ಕಾರಣ ಎಂದು ತೇಜಸ್ವಿ ಸೂರ್ಯ ಟೀಟ್ ಮಾಡಿದ್ದರು. ಆದರೆ ಜಿಲ್ಲಾಡಳಿತ ಹಾಗೂ ಪೊಲೀಸರು ಸಾಲಬಾಧೆಯಿಂದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಸ್ಪಷ್ಟಪಡಿಸಿದ್ದರು.

ಈ ಬೆಳವಣಿಗೆ ಬೆನ್ನಲ್ಲೇ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸುಳ್ಳು ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!