ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ FIR ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಡಾ ಹಗರಣದ ದೂರುದಾರ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಅವರು ನೀಡಿದ ದೂರಿನ ಆಧಾರದ ಮೇಲೆ ಇಂದು ಎಫ್‌ಐಆರ್ ದಾಖಲಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಪತ್ನಿ ಬಿ.ಎಂ.ಪಾರ್ವತಿ ಮುಡಾದಿಂದ ಪಡೆದ ಸೈಟ್​ ಕ್ರಯಪತ್ರದ ಮುದ್ರಾಂಕ ಶುಲ್ಕದ ಬಗ್ಗೆ ಸ್ನೇಹಮಯಿ ಕೃಷ್ಣ ಆಕ್ಷೇಪಿಸಿದ್ದರು. ಹೀಗಾಗಿ ಸ್ನೇಹಮಯಿ ಕೃಷ್ಣ ಬ್ಲಾಕ್​ಮೇಲ್ ಮಾಡುತ್ತಿದ್ದಾರೆ. ಈ ಬಗ್ಗೆ ಕ್ರಮಕೈಗೊಳ್ಳುವಂತೆ ಎಂ.ಲಕ್ಷ್ಮಣ ದೂರು ನೀಡಿದ್ದರು. ಹೀಗಾಗಿ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!