ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡನ ಮೇಲೆ ಎಫ್ಐಆರ್

ದಿಗಂತ ವರದಿ ಕಲಬುರಗಿ:

ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಪ್ರತಿಭಟನೆಯೊಂದರಲ್ಲಿ ಇತ್ತೀಚೆಗೆ ಪ್ರಚೋದನಕಾರಿ ಭಾಷಣ, ಕೋಮು ಸೌಹಾರ್ದತೆ ಕದಡುವ ನಿಟ್ಟಿನಲ್ಲಿ ಹೇಳಿಕೆ ನೀಡಿದ ಗಂಭೀರ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ಮುಕ್ರಂಖಾನ್ ಮೇಲೆ ಸೇಡಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಹಾಗೂ ಶ್ರೀ ರಾಮ ಸೇನೆಯ ರಾಜ್ಯ ಗೌರವಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರ ಹೆಸರುಗಳನ್ನು ಉಲ್ಲೇಖಿಸಿ, ಹಿಜಾಬ್ ತಂಟೆಗೆ ಬಂದರೆ ತುಂಡು ತುಂಡು ಮಾಡುವುದಾಗಿ ಮುಕ್ರಂಖಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಈ ಸಂಬಂಧ ಅವರ ವಿರುದ್ಧ ಐಪಿಸಿ 153,294 ಅಡಿಯಲ್ಲಿ ಪೋಲಿಸರು ಪ್ರಕರಣ ದಾಖಲಿಸಿದ್ದಾರೆ. ಮುಕ್ರಂಖಾನ್ ಹೇಳಿಕೆ ಖಂಡಿಸಿ ಹಿಂದೂಪರ ಸಂಘಟನೆಗಳು ಠಾಣೆಯ ಮುಂದೆ ಪ್ರತಿಭಟನೆ ಮಾಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!