ಬಾಲಿವುಡ್ ನಟ ಶಾರುಖ್ ಪತ್ನಿ ಗೌರಿ ಖಾನ್ ವಿರುದ್ಧ ಎಫ್ ಐಆರ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬಾಲಿವುಡ್ ನಟ ಶಾರುಖ್ ಖಾನ್ ಪತ್ನಿ ಗೌರಿ ಖಾನ್ ವಿರುದ್ಧ ಉತ್ತರ ಪ್ರದೇಶದ ಲಕ್ನೋದಲ್ಲಿ ಬುಧವಾರ ಎಫ್‌ಐಆರ್ ದಾಖಲಾಗಿದೆ.

ಗೌರಿ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 409 (ಕ್ರಿಮಿನಲ್ ನಂಬಿಕೆ ಉಲ್ಲಂಘನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮುಂಬೈನ ನಿವಾಸಿ ಜಸ್ವಂತ್ ಷಾ ಎಂಬವರು ದೂರು ಸಲ್ಲಿಸಿದ್ದಾರೆ. ಗೌರಿ ಖಾನ್‌ ಅವರು ತುಳಸಿಯಾನಿ ಕಟ್ಟಡ ನಿರ್ಮಾಣ ಕಂಪನಿಗೆ ಬ್ರಾಂಡ್‌ ಅಂಬಾಸಿಡರ್‌ ಆಗಿದ್ದು, ಅವರ ಕಂಪನಿ ನಿರ್ಮಾಣ ಮಾಡಿದ್ದ ಪ್ಲಾಟ್‌ ಅನ್ನು ಖರೀದಿಸಿದ್ದೆ. ಇದಕ್ಕೆ ₹ 86 ಲಕ್ಷ ಹಣವನ್ನು ಪಾವತಿ ಮಾಡಿದ್ದೇನೆ. ಆದರೆ ಕಂಪನಿಯವರು ನನಗೆ ನೀಡಬೇಕಾದ ಪ್ಲಾಟ್‌ ಅನ್ನು ಬೇರೆಯವರಿಗೆ ನೀಡಿದ್ದಾರೆ ಎಂದು ಜಸ್ವಂತ್ ದೂರಿನಲ್ಲಿ ಹೇಳಿದ್ದಾರೆ.

ಗೌರಿ ಮಾತ್ರವಲ್ಲದೆ ಕಂಪನಿ ಎಂಡಿ ಅನಿಲ್ ಕುಮಾರ್ ತುಳಸಿಯಾನಿ ಮತ್ತು ಅದರ ನಿರ್ದೇಶಕ ಮಹೇಶ್ ತುಳಸಿಯಾನಿ ವಿರುದ್ಧವೂ ದೂರು ದಾಖಲಾಗಿದೆ.

ಬ್ರಾಂಡ್ ಅಂಬಾಸಿಡರ್ ಗೌರಿ ಖಾನ್ ಅವರಿಂದ ಪ್ರಭಾವಿತರಾಗಿ ಫ್ಲಾಟ್ ಖರೀದಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!