ಹಾಸ್ಯ ನಟ ಹುಲಿ ಕಾರ್ತಿಕ್‌ ಮೇಲೆ ಎಫ್‌ಐಆರ್‌ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹಾಸ್ಯ ನಟ ‘ಹುಲಿ’ ಕಾರ್ತಿಕ್ ಅವರು ಇತ್ತೀಚೆಗಷ್ಟೇ ‘ಗಿಚ್ಚಿ ಗಿಲಿಗಿಲಿ’ ಮೂರನೇ ಸೀಸನ್​ನ ವಿನ್​ ಆಗಿದ್ದರು. ಇದರಿಂದ ಜನಪ್ರಿಯತೆ ಹೆಚ್ಚಿತ್ತು.

ಇತ್ತೀಚೆಗೆ ರಿಲೀಸ್ ಆದ ‘ಪೌಡರ್’ ಸೇರಿ ಕೆಲವು ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸ್ಪರ್ಧಿ ಆಗುತ್ತಾರೆ ಎಂದು ವರದಿ ಆಗಿತ್ತು. ಆದರೆ, ಹಾಗಾಗಿಲ್ಲ. ಈಗ ಅವರು ಮಾತನಾಡುವಾಗ ಎಡವಿದ್ದಾರೆ. ಈ ಕಾರಣಕ್ಕೆ ಅವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಕಲರ್ಸ್ ಕನ್ನಡ ವಾಹಿನಿಯ ‘ಅನುಬಂಧ ಅವಾರ್ಡ್’ ಕಾರ್ಯಕ್ರಮದಲ್ಲಿ ಬಳಕೆ ಮಾಡಿದ ಪದವು ಬೋವಿ ಜನಾಂಗಕ್ಕೆ ನೋವುಂಟು ಮಾಡಿದೆ. ಹೀಗಾಗಿ ಜಾತಿ ನಿಂದಿಸಿ ಮಾತನಾಡಿದ ನಟನ ಮೇಲೆ ಕ್ರಮ ಕೈಗೊಳ್ಳಲು ದೂರು ನೀಡಲಾಗಿದೆ. ಹುಲಿ ಕಾರ್ತಿಕ್ ಅಲ್ಲದೆ ‘ಅನುಬಂಧ’ ಅವಾರ್ಡ್ಸ್​ನ ಸಂಭಾಷಣೆಕಾರ, ಕಾರ್ಯಕ್ರಮದ ನಿರ್ಮಾಪಕ, ನಿರ್ದೇಶಕರ ಮೇಲೂ ಕೇಸ್ ದಾಖಲಾಗಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!