ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿವಾದಾತ್ಮಕ ಹೇಳಿಕೆ ಹಿನ್ನೆಲೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಶಿವಮೊಗ್ಗದ ರಾಗಿಗುಡ್ಡಕ್ಕೆ ಭೇಟಿ ನೀಡಿದ್ದ ಅರುಣ್ ಪ್ರಚೋದನಾಕಾರಿ ಮಾತುಗಳನ್ನು ಆಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಸುಮೋಟೊ ಪ್ರಕರಣ ದಾಖಲಾಗಿದೆ.
ಹಿಂದೂಗಳು ಮನೆಯಲ್ಲಿ ತಲ್ವಾರ್ ಇಟ್ಟುಕೊಳ್ಳಬೇಕು, ಆಯುಧ ಪೂಜೆ ದಿನ ಅದನ್ನು ಪೂಜೆ ಮಾಡುವ ಅಭ್ಯಾಸ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ. ನಿಷೇಧಾಜ್ಞೆ ನಡುವೆ ಪ್ರಚೋದನಾಕಾರಿ ಭಾಷಣೆ ಮಾಡಿದ ಹಿನ್ನೆಲೆ ಪ್ರಕರಣ ದಾಖಲಾಗಿದೆ.