ಕೋಮು ದ್ವೇಷ ಭಾಷಣ : ಸಚಿವ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕೋಮು ದ್ವೇಷ ಭಾಷಣ ಆರೋಪದ ಮೇರೆಗೆ ತೋಟಗಾರಿಕೆ ಸಚಿವ ಮುನಿರತ್ನ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

‘ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯದವರನ್ನು ಹೊಡೆದು ಓಡಿಸಿ’ ಎಂದು ಕೋಮು ದ್ವೇಷದ ಹೇಳಿಕೆ ನೀಡಿದ್ದರು. ಆ ಸಮುದಾಯದ ಗೌರವ ಹಾಗೂ ಹಕ್ಕುಗಳಿಗೆ ಚ್ಯುತಿ ತಂದಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಅಧಿಕಾರಿ ಮನೋಜ್‌ಕುಮಾರ್ ದೂರು ನೀಡಿದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!