ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರವಾಸಿಗರ ನಡುವೆ ಹೊಡೆದಾಟ ಆಗಿರುವ ಘಟನೆ ಬಂಡೀಪುರದಲ್ಲಿ ನಡೆದಿದೆ. ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆಯ ಬಗ್ಗೆ ತಿಳಿದ ನಂತರ ಪೊಲೀಸರು ಭಾನುವಾರ ಸಂಜೆ ಎಫ್‌ಐಆರ್ ದಾಖಲಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಥರ್ಡ್ ಐ ಎಂಬ ಖಾತೆಯಲ್ಲಿ, ಕೇರಳ ಮೂಲದ ಅರ್ಜುನ್ ಎಂಬವವರಿಗೆ ಬೆಂಗಳೂರು ಮೂಲದ ನಾಲ್ವರು ಯುವಕರು ಥಳಿಸಿದ್ದ ವೀಡಿಯೋವನ್ನು ಪೋಸ್ಟ್ ಮಾಡಲಾಗಿದ್ದು, ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಟ್ಯಾಗ್ ಕೂಡ ಮಾಡಲಾಗಿದೆ. ಟ್ವೀಟ್ ಗಮನಿಸಿದ ಎಡಿಜಿಪಿ ಅಲೋಕ್ ಕುಮಾರ್ ಚಾಮರಾಜನಗರ ಪೊಲೀಸ್ ಸಿಬ್ಬಂದಿ ಜೊತೆಗೆ ಮಾತನಾಡಿ ಕ್ರಮಕ್ಕೆ ಸೂಚಿಸಿದ್ದರು. ಅದರಂತೆಯೇ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ನಾಲ್ವರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ.
ಟ್ವಿಟರ್‌ನಲ್ಲಿ ಈ ಕುರಿತು ಆಕ್ರೋಶ ವ್ಯಕ್ತವಾಗಿದ್ದು, ಸೂಕ್ತ ತನಿಖೆ ಕೈಗೊಳ್ಳುವಂತೆ ನೆಟ್ಟಿಗರು ಒತ್ತಾಯಿಸದ್ದಾರೆ.