ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಇಂದು ಎಫ್‌ಐಆರ್: ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದ ದೆಹಲಿ ಪೊಲೀಸರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ರೆಸ್ಲಿಂಗ್ ಫೆಡರೇಶನ್(ಡಬ್ಲ್ಯುಎಫ್ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ನೀಡಿರುವ ಲೈಂಗಿಕ ಕಿರುಕುಳ ಆರೋಪದ ಸಂಬಂಧ ಇಂದು ಎಫ್ಐಆರ್ ದಾಖಲಿಸಲು ನಿರ್ಧರಿಸಲಾಗಿದೆ ಎಂದು ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್ ಗೆ ತಿಳಿಸಿದರು.

ಈ ವೇಳೆ ಮುಖ್ಯ ನ್ಯಾಯಮೂರ್ತಿ ಮಹಿಳಾ ಕುಸ್ತಿಪಟುಗಳಿಗೆ ಭದ್ರತೆ ಒದಗಿಸುವಂತೆಯೂ ಪೊಲೀಸರಿಗೆ ಸೂಚಿಸಿದ್ದಾರೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕಳೆದ ಹಲವು ದಿನಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಇದರ ನಡುವೆ ಪ್ರಕರಣ ದಾಖಲಿಸಲು ತಮ್ಮ ಮನವಿಯ ತುರ್ತು ವಿಚಾರಣೆಗಾಗಿ ಕುಸ್ತಿಪಟುಗಳು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಕುಸ್ತಿಪಟುಗಳ ಕೋರಿಕೆಯ ಮೇರೆಗೆ ಸುಪ್ರೀಂ ಕೋರ್ಟ್ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿತ್ತು.ಏಕೆ ಪ್ರಕರಣ ದಾಖಲಿಸಿಲ್ಲ ಎಂದು ಕೇಳಿತ್ತು.

ಕುಸ್ತಿಪಟುಗಳ ದೂರಿನ ಮೇರೆಗೆ ಡಬ್ಲ್ಯುಎಫ್ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸಲು ನಿರ್ಧರಿಸಲಾಗಿದೆ ಎಂದು ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್ಗೆ ತಿಳಿಸಿದ್ದಾರೆ. ಇಂದು ಎಫ್ಐಆರ್ ದಾಖಲಿಸಲಾಗುವುದು ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್ಗೆ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!