Friday, July 1, 2022

Latest Posts

ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ: ಸಾವಿನ ಸಂಖ್ಯೆ 18ಕ್ಕೆ ಏರಿಕೆ, ಮೃತರ ಕುಟುಂಬಕ್ಕೆ 4ಲಕ್ಷ ರೂ. ಪರಿಹಾರ ಘೋಷಣೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಗುಜರಾತ್ ನ ಬರುಚ್ನಲ್ಲಿರುವ ವೆಲ್ಫೇರ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.
ತಡರಾತ್ರಿ 1 ಗಂಟೆ ಸುಮಾರಿಗೆ 4 ಅಂತಸ್ತಿನ ನಿಯೋಜಿತ ಕೋವಿಡ್-19 ಆಸ್ಪತ್ರೆ ಬರುಚ್-ಜಂಬುಸರ್ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಬೆಂಕಿಯ ಖೆನ್ನಾಲಿಗೆಗೆ ಸಿಲುಗಿ 18 ಕೊರೋನಾ ರೋಗಿಗಳು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಬರುಚ್ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರಸಿನ್ಹ್ ಚುದಾಸಮಾ ತಿಳಿಸಿದ್ದಾರೆ.
ಮೃತರ ಕುಟುಂಬಕ್ಕೆ ಗುಜರಾತ್ ಮುಖ್ಯಮಂತ್ರಿ ವಿಜಯ್ ರುಪಾನಿ ತೀವ್ರ ಸಂತಾಪ ಸೂಚಿಸಿದ್ದು, ಪ್ರತಿ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss