Sunday, August 14, 2022

Latest Posts

ನೆಮ್ಮದಿಯಿಂದ ನಿದ್ರಿಸುತ್ತಿದ್ದ ಕುಟುಂಬಕ್ಕೆ ಬೆಂಕಿಯೇ ಶತ್ರು, ಐವರು ಸಜೀವ ದಹನ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಮನೆಗೆ ಬೆಂಕಿಬಿದ್ದು ಕುಟುಂಬದ ಐವರು ಬೆಂಕಿಗೆ ಆಹುತಿಯಾಗಿದ್ದಾರೆ.
ಬಿಹಾರದ ಕಿಶನ್‌ಜಂಗ್‌ನಲ್ಲಿ ಮನೆಯೊಂದು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಮನೆಯೊಳಗಿದ್ದ ನೂರ್ ಆಲಂ,ತೌಫಾ, ಬಬ್ಲಿ, ರಹಮತ್, ಶಾಹಿದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನೂರ್ ಆಲಂ ಪತ್ನಿಗೆ ಸುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಯವರೆಲ್ಲರೂ ಮಲಗಿದ್ದಾಗ ಆಕಸ್ಮಿಕವಾಗಿ ಬೆಂಕಿ ತಗುಲಿ, ಇಡೀ ಮನೆಯೇ ಹೊತ್ತುರಿದಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಅಗ್ನಿನಂದಿಸಿದ್ದು, ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss