ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈನ ಸಾಂತಾಕ್ರೂಜ್ ಪ್ರದೇಶದಲ್ಲಿರುವ ಗ್ಯಾಲಕ್ಸಿ ಹೋಟೆಲ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿಯಿಂದಾಗಿ ಇಬ್ಬರಿಗೆ ಗಾಯಗಳಾಗಿದ್ದು ಮೂವರು ಸಾವನ್ನಪ್ಪಿದ್ದಾರೆ. ಅಗ್ನಿ ಅವಘಡದ ಕುರಿತು ಮಾಹಿತಿ ಪಡೆದ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿ ಸಾಕಷ್ಟು ಪ್ರಯತ್ನದ ನಂತರ ಬೆಂಕಿಯನ್ನು ನಂದಿಸಿವೆ.
ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಬೆಂಕಿ ಅವಘಡದ ಮಾಹಿತಿ ಬಂದ ತಕ್ಷಣ ಹೋಟೆಲ್ನಲ್ಲಿ ಕಾಲ್ತುಳಿತ ಉಂಟಾಗಿತ್ತು.
ಹೋಟೆಲ್ ಸಿಬ್ಬಂದಿ ತರಾತುರಿಯಲ್ಲಿ ಹೋಟೆಲ್ ಖಾಲಿ ಮಾಡಿದರು. ಮಾಹಿತಿ ಪಡೆದ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕಾಗಮಿಸಿ ಸಾಕಷ್ಟು ಪ್ರಯತ್ನ ನಡೆಸಿ ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ.