ನಾಂಪಲ್ಲಿ ವಸ್ತುಪ್ರದರ್ಶನದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ನಾಲ್ಕು ಕಾರುಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹೈದರಾಬಾದ್‌ನ ನಾಂಪಲ್ಲಿ ಎಕ್ಸಿಬಿಷನ್‌ನಲ್ಲಿ ನಿನ್ನೆ ರಾತ್ರಿ ಭಾರೀ ಬೆಂಕಿ ಅವಘಡ ಉಂಟಾಗಿದೆ.  ವಸ್ತುಪ್ರದರ್ಶನಕ್ಕೆ ಬಂದವರು ಗಾಂಧಿ ಭವನದ ಬಳಿ ಇರುವ ಗೃಹಕಲ್ಪ ಕಟ್ಟಡದ ಎದುರು ಕಾರು ನಿಲ್ಲಿಸಿದ್ದರು. ಅದರಲ್ಲಿದ್ದ ಎಲೆಕ್ಟ್ರಿಕ್ ಕಾರಿನಿಂದ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಅಕ್ಕಪಕ್ಕದ ಇತರ ಮೂರು ಕಾರುಗಳಿಗೆ ವ್ಯಾಪಿಸಿದೆ. ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರು. ಈ ಅಪಘಾತದಿಂದಾಗಿ ನಾಂಪಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಪ್ರವೃತ್ತರಾಗಿ ಬೆಂಕಿ ನಂದಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಈ ಅಪಘಾತದಲ್ಲಿ ನಾಲ್ಕು ಕಾರುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ನಾಂಪಲ್ಲಿ ವಸ್ತುಪ್ರದರ್ಶನಕ್ಕೆ ಬರುವವರಿಗೆ ಅಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ವಾಹನ ಸವಾರರು ತಮ್ಮ ವಾಹನಗಳನ್ನು ಅಲ್ಲೇ ನಿಲ್ಲಿಸಿದ್ದರು. ಅಲ್ಲಿ ಸಾಕಷ್ಟು ವಾಹನಗಳು ನಿಂತಿವೆ. ಇಂತಹ ಜಾಗದಲ್ಲಿ ಅನಿರೀಕ್ಷಿತವಾಗಿ ಬೆಂಕಿ ಕಾಣಿಸಿಕೊಂಡಿದ್ದು ಅಲ್ಲೋಲ ಕಲ್ಲೋಲ ಉಂಟಾಯಿತು. ಒಂದು ವೇಳೆ ಹೆಚ್ಚಿನ ವಾಹನಗಳಿಗೆ ಬೆಂಕಿ ವ್ಯಾಪಿಸಿದರೆ ಭಾರೀ ಅವಘಡ ಸಂಭವಿಸುತ್ತಿತ್ತು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದರು. ಆದರೆ ಸಕಾಲದಲ್ಲಿ ಬೆಂಕಿ ನಂದಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಸದ್ಯ ಯಾವುದೇ ಪ್ರಾಣಹಾನಿ ಉಂಟಾಗದಿರುವುದರಿಂದ ಎಲ್ಲರೂ ನಿಟ್ಟುಸಿರು ಬಿಟ್ಟರು.

ಕಳೆದ ವಾರ ಸಿಕಂದರಾಬಾದ್ ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿತ್ತು. ಡೆಕ್ಕನ್ ಸ್ಪೋರ್ಟ್ಸ್ ವೇರ್ ಮಾಲ್ ಕಟ್ಟಡ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. 22 ಅಗ್ನಿಶಾಮಕ ಸಿಬ್ಬಂದಿ ಸುಮಾರು 12 ಗಂಟೆಗಳ ಕಾಲ ಶ್ರಮಿಸಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!