Monday, August 8, 2022

Latest Posts

ರವಾ ಮಿಲ್ ನಲ್ಲಿ ಆಕಸ್ಮಿಕ ಬೆಂಕಿ: ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ನಾಶ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ ಹುಬ್ಬಳ್ಳಿ:

ನಗರದ ವೀರಾಪೂರ ಓಣಿಯಲ್ಲಿರುವ ರವಾ ಮಿಲ್ ನಲ್ಲಿ ಆಕಸ್ಮಿಕ ಬೆಂಕಿ ತಗುಲಿದ್ದು, ಮೊದಲ ಮಹಡಿಯಲ್ಲಿ ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಹೋಗಿರುವ ಘಟನೆ ಇಂದು ಮುಂಜಾನೆ ನಡೆದಿದೆ.

ಟಿ.ಕೆ. ಹಬೀಬ ರವಾ ಮಿಲ್ ನಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳಿದ್ದು, ಅವುಗಳಿಗೆ ಬೆಂಕಿ ತಗುಲಿದ ಪರಿಣಾಮ ಸುತ್ತಮುತ್ತಲಿನ ಪ್ರದೇಶದಲ್ಲಿ ತೀವ್ರ ಹೊಗೆ ಆವರಿಸಿದೆ. ಕಟ್ಟಡದ ಮೇಲ್ಬಾಗದಲ್ಲಿ ಹೊತ್ತಿರುವ ಬೆಂಕಿ ಎಲ್ಲ ಕಡೆಯಲ್ಲಿಯೂ ಆವರಿಸಿದ್ದು, ಕಿಟಕಿಯ ಮೂಲಕ ಬೆಂಕಿಯ ಕೆನ್ನಾಲಿಗೆ ಹೊರ ಬರುತ್ತಿರುವುದು ಜನರಲ್ಲಿ ಆತಂಕ ಉಂಟು ಮಾಡಿದೆ.

ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ಆರಿಸಲು ಹರಸಾಹಸ ಪಡುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss