Wednesday, March 29, 2023

Latest Posts

 ರೈಲು ನಿಲ್ದಾಣದ ಕ್ವಾಟ್ರಸ್‌ನಲ್ಲಿ ಅಗ್ನಿ ಅನಾಹುತ: ಮುಗಿಲೆತ್ತರಕ್ಕೆ ಚಿಮ್ಮಿದ ಜ್ವಾಲೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹೈದರಾಬಾದ್‌ನಲ್ಲಿ ಸರಣಿ ಅಗ್ನಿ ಅವಘಡಗಳು ನಗರದ ನಿವಾಸಿಗಳನ್ನು ಆತಂಕಕ್ಕೆ ದೂಡುತ್ತಿವೆ. ಸಿಕಂದರಾಬಾದ್‌ನ ಡೆಕ್ಕನ್ ಮಾಲ್ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ನಗರದ ನಿವಾಸಿಗಳನ್ನು ಬೆಚ್ಚಿ ಬೀಳಿಸಿತ್ತು. ಇದೀಗ ಮತ್ತೊಮ್ಮೆ ಬಹುಮಹಡಿ ಕಟ್ಟಡ ಬೆಂಕಿಗಾಹುತಿಯಾಗಿತ್ತು ಸ್ಥಳೀಯರಲ್ಲಿ ಭಯ ಶುರುವಾಗಿದೆ.

ತಡರಾತ್ರಿ ಸಿಕಂದರಾಬಾದ್‌ನ ರೈಲು ನಿಲ್ದಾಣದ ಬಳಿ ಭಾರಿ ಬೆಂಕಿ ಕಾಣಿಸಿಕೊಂಡಿತ್ತು. ರೈಲ್ವೆ ನಿಲ್ದಾಣದ ಹಳೆಯ ಕ್ವಾಟ್ರಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಸೆಕೆಂಡ್‌ಗಳಲ್ಲಿ ಬೆಂಕಿ ಭಾರೀ ಪ್ರಮಾಣದಲ್ಲಿ ಸ್ಫೋಟಗೊಂಡು ಇಡೀ ಪ್ರದೇಶ ದಟ್ಟ ಹೊಗೆಯಿಂದ ಆವರಿಸಿತ್ತು. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಖಾಲಿ ಜಾಗದಲ್ಲಿ ಕಸ ತುಂಬಿ ವರ್ಷಗಳೇ ಕಳೆದಿದ್ದು, ಅಪರಿಚಿತ ವ್ಯಕ್ತಿಗಳು ಕಸಕ್ಕೆ ಬೆಂಕಿ ಹಚ್ಚಿದ್ದು, ಅನಾಹುತಕ್ಕೆ ಕಾರಣವಾಗಿದೆ.  ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಅಗ್ನಿಶಾಮಕ ಯಂತ್ರಗಳ ಮೂಲಕ ಬೆಂಕಿಯನ್ನು ಹತೋಟಿಗೆ ತಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!