ಶಾರ್ಟ್ ಸರ್ಕ್ಯೂಟ್ ನಿಂದ ಗಾದಿ ಅಂಗಡಿಗೆ ಬೆಂಕಿ; ಲಕ್ಷಾಂತರ ಮೌಲ್ಯದ ಗಾದಿ ಹಾನಿ

ಹೊಸದಿಗಂತ ವರದಿ ವಿಜಯಪುರ:

ಆಕಸ್ಮಿಕ ಶಾರ್ಟ್ ಸರ್ಕ್ಯೂಟ್ ನಿಂದ ಗಾದಿ ಅಂಗಡಿಗೆ ಬೆಂಕಿ ತಗುಲಿರುವ ಘಟನೆ ನಗರದ ಶಿವಾಜಿ ವೃತ್ತದ ಬಳಿ ನಡೆದಿದೆ. ಇಲ್ಲಿನ ಗಾದಿ ಅಂಗಡಿ ನದಾಫ್ ಎಂಬುವರಿಗೆ ಸೇರಿದ್ದಾಗಿದ್ದು, ಬೆಂಕಿ ಹೊತ್ತಿ ಉರಿಯುತ್ತಿರುವ ಸುದ್ದಿ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಲು ಮುಂದಾಗಿದ್ದಾರೆ.

ಬೆಂಕಿ ಅವಘಡದಿಂದ ಲಕ್ಷಾಂತರ ಮೌಲ್ಯದ ಗಾದಿ ಸುಟ್ಟು ಭಸ್ಮವಾಗಿದೆ ಎಂದು ಹೇಳಲಾಗಿದೆ. ಗಾಂಧಿ ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!