ಬೆಂಗಳೂರಿನ ಗ್ಯಾರೇಜ್‌ನಲ್ಲಿ ಬೆಂಕಿ ಅವಘಡ: ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಬಸವೇಶ್ವರ ನಗರದ ಗ್ಯಾರೇಜ್‌ನಲ್ಲಿ ಇಂದು ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಗ್ಯಾರೇಜ್ ಮಾಲೀಕ ಜಾರ್ಜ್, ಕಾರ್ಮಿಕ ಶಿವ ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ.

ಈ ಸ್ಫೋಟದಲ್ಲಿ ಎರಡು ಅಂತಸ್ತಿನ ಮನೆಗೆ ಹಾನಿಯಾಗಿದ್ದು, ಸ್ವಿಫ್ಟ್ ಡಿಸೈರ್ ಕಾರು ಮತ್ತು ಬೈಕ್ ಗೆ ಸಂಪೂರ್ಣ ಹಾನಿಯಾಗಿದೆ. ಮೇಲ್ನೋಟಕ್ಕೆ ಗ್ಯಾರೇಜ್‌ನಲ್ಲಿ ವೆಲ್ಡಿಂಗ್ ಯಂತ್ರ ಸ್ಫೋಟಗೊಂಡಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಅಷ್ಟೇ ಅಲ್ಲದೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ. ಈ ಘಟನೆಯ ನಂತರ, ಗ್ಯಾರೇಜ್ ಬಳಿಯ ಮನೆ ಮತ್ತು ನಿರ್ಮಾಣ ಹಂತದಲ್ಲಿರುವ ಕಟ್ಟಡಕ್ಕೂ ಹಾನಿಯಾಗಿದೆ. ಈ ಸಂಬಂಧ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!