ಬೆಂಗಳೂರಿನಲ್ಲಿ ಅಗ್ನಿ ಅವಘಡ: ಐರೆನ್ ಬಾಕ್ಸ್ ಒಡೆದು ಹೊತ್ತಿ ಉರಿದ ಮನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಐರೆನ್ ಬಾಕ್ಸ್ ನಿಂದ ಸಂಪೂರ್ಣ ಮನೆಯೇ ಹೊತ್ತಿ ಉರಿದಿರುವ ಘಟನೆ ನಡೆದಿದೆ.

ಬೆಂಗಳೂರಿನ ಮಲ್ಲೇಶ್ವರಂ ನ 13 ನೇ ಕ್ರಾಸ್ ನಲ್ಲಿ ಬಟ್ಟೆ ಐರನ್ ಮಾಡಿದ ಬಳಿಕ ಸ್ವಿಚ್ ಆಫ್ ಮಾಡದೇ ಮನೆಗೆ ಬೀಗ ಹಾಕಿ ಹೋಗಿದ್ದು, ಇದರಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!