ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಶೋ ರೂಮ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಯುವತಿ ಸಜೀವದಹನವಾಗಿದ್ದಾರೆ.
ರಾಜಾಜಿನಗರದ ರಾಜಕುಮಾರ್ ರಸ್ತೆಯ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂಲ್ಲಿ ಘಟನೆ ನಡೆದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸ ನಡೆಸಿದ್ದಾರೆ.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗಲಿರುವ ಶಂಕೆ ವ್ಯಕ್ತವಾಗಿದೆ.
ಶೋರೂಂನಲ್ಲಿ ಸೇಲ್ಸ್ ಗರ್ಲ್ ಆಗಿದ್ದ ಪ್ರಿಯಾ ಮೃತಪಟ್ಟವರು. ಇಡೀ ಶೋರೂಂಗೆ ಬೆಂಕಿ ವ್ಯಾಪಿಸಿದ್ದು, ಸ್ಕೂಟರ್ ಗಳು ಸಂಪೂರ್ಣ ಬೆಂಕಿಗಾಹುತಿಯಾಗಿವೆ. ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.