ಮೀನುಗಾರಿಕಾ ಬೋಟ್‌ನಲ್ಲಿ ಬೆಂಕಿ ಅವಘಡ, ಲಕ್ಷಾಂತರ ರೂ ನಷ್ಟ!

ಹೊಸದಿಗಂತ ಡಿಜಿಟಲ್ ಡೆಸ್ಕ್:‌

ಮೀನುಗಾರಿಕಾ ಬೋಟ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ರೂಪಾಯಿ ನಷ್ಟವಾಗಿರುವ ಘಟನೆ ಮಂಗಳೂರಿನಲ್ಲಿ ಇಂದು ಮುಂಜಾನೆ ನಡೆದಿದೆ.

ಜಿಲ್ಲೆಯ ಬೆಂಗ್ರೆ ಮೀನುಗಾರಿಕಾ ಬಂದರಿನಲ್ಲಿ ಇಂದು ಈ ಅವಘಡ ಸಂಭವಿಸಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಕದ್ರಿ, ಪಾಂಡೇಶ್ವರ್​​ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡಿದ್ದಾರೆ. ಬೋಟ್ ಬೆಂಕಿಗೆ ಆಹುತಿಯಾಗಿದ್ದರಿಂದ ಲಕ್ಷಾಂತರ ಮೌಲ್ಯದ ನಷ್ಟ ಉಂಟಾಗಿದೆ.

ಬೃಹತ್‌ ಬೆಂಕಿಗೆ ಬಂದರಿನಲ್ಲಿ ಲಂಗರು ಹಾಕಿದ್ದ ಇತರ ಬೋಟ್​ಗಳಿಗೆ ಹರಡುವ ಭೀತಿ ಇತ್ತು. ಆದರೆ ಬೆಂಕಿಯ ರಭಸಕ್ಕೆ ದಡದಲ್ಲಿದ್ದ ಬೋಟು ನದಿ ನೀರಿನ ಮಧ್ಯಕ್ಕೆ ಚಲಿಸಿದೆ. ಹೀಗಾಗಿ ಇದರಿಂದಾಗಿ ಇತರ ಬೋಟ್​ಗಳಿಗೆ ಬೆಂಕಿ ತಗುಲುವುದು ತಪ್ಪಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. ಈ ಬೆಂಕಿ ಅವಘಡಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!