ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಪಡುವಕೋಟೆ ಗ್ರಾಮದಲ್ಲಿ ಗ್ಯಾರೇಜ್‌ನಲ್ಲಿ ಬೆಂಕಿ ಕಾಣಿಸಿಕೊಂಡು ವಾಹನಗಳು ಹೊತ್ತಿ ಉರಿದ ಘಟನೆ ನಡೆದಿದೆ.
ಅಜಿತ್ ಎಂಬುವವರ ಗ್ಯಾರೇಜ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಗ್ಯಾರೇಜ್‌ನಲ್ಲಿದ್ದ 18 ದ್ವಿಚಕ್ರ ವಾಹನಗಳು ಹಾಗೂ ಎರಡು ಕಾರುಗಳು ಸುಟ್ಟು ಕರಕಲಾಗಿವೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಹೆಚ್.ಡಿ. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.