ಕೋರಮಂಗಲದಲ್ಲಿ ಅಗ್ನಿ ಅವಘಡ : ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದ ಯುವಕ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಕೋರಮಂಗಲದಲ್ಲಿಅಡುಗೆ ಕೋಣೆಯಲ್ಲಿ ಕಾಣಿಸಿಕೊಂಡ ಬೆಂಕಿಗೆ ಪಬ್ ಆಹುತಿಯಾಗಿರುವ ಘಟನೆ ನಡೆದಿದೆ.

ಮಡ್ ಪೈಪ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದ ಮೇಲಂತಸ್ತು ಸಂಪೂರ್ಣ ಬೆಂಕಿಗಾಹುತಿಯಾಗಿದೆ.

ಕಟ್ಟಡದ ಮೇಲಂತಸ್ತಿನಲ್ಲಿ ಮಡ್ ಪೈಪ್ ಎಂಬ ಪಬ್ ನಡೆಸಲಾಗುತ್ತಿತ್ತು. ಇಂದು ಮುಂಜಾನೆ ಪಬ್​ನ ಅಡುಗೆ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡು ನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಇಲ್ಲಿನ ಪೀಠೋಪಕರಣಗಳಿಗೆ ವ್ಯಾಪಿಸಿದೆ. ತಕ್ಷಣ ಎಚ್ಚೆತ್ತ ಸಿಬ್ಬಂದಿ ಪಬ್​ನಿಂದ ಹೊರಬಂದಿದ್ದಾರೆ. ಅಡುಗೆ ಮಾಡುವ ವೇಳೆ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.ಸ್ಥಳದಲ್ಲಿ 4 ಅಗ್ನಿ ಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಮಡ್ ಪೈಪ್ ಪಬ್ ಇದ್ದು, ಅದೇ ಕಟ್ಟಡದ ಕೆಲ ಅಂತಸ್ತಿನಲ್ಲಿ ಕಾರು ಶೋರೂಮ್ ಸಹ ಇತ್ತು. ಪಬ್ ಮಧ್ಯಾಹ್ನ 12 ಗಂಟೆಯ ನಂತರ ಕಾರ್ಯಾರಂಭಿಸಲಿರುವುದರಿಂದ ಹೆಚ್ಚು ಸಿಬ್ಬಂದಿ ಇರಲಿಲ್ಲ. ಆದರೆ, ಪಬ್​ನಲ್ಲಿದ್ದ ಓರ್ವ ಸಿಬ್ಬಂದಿ ಕಟ್ಟಡದಿಂದ ಜಿಗಿದಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!