ಮಧ್ಯ ಪ್ರದೇಶದ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಧ್ಯಪ್ರದೇಶದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ್ದು ಘಟನೆಯಲ್ಲಿ ಕಾರ್ಮಿಕನೊಬ್ಬನಿಗೆ ಗಾಯಗಳಾಗಿವೆ.

ಧಾರ್‌ ಜಿಲ್ಲೆಯ ಪಿತಾಂಪುರ್‌ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯ ಸೆಕ್ಟರ್‌ 2 ಪ್ರದೇಶದಲ್ಲಿ ಏಕಾಏಕಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ, ಪೋಲೀಸರು ರಕ್ಷಣಾ ಕಾರ್ಯಕ್ಕೆ ಧಾವಿಸಿದ್ದಾರೆ. ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಇಂದೋರ್‌ ಗೆ ರವಾನಿಸಲಾಗಿದ್ದು ಘಟನೆಗೆ ಕಾರಣವೇನೆಂಬುದು ಪತ್ತೆಯಾಗಿಲ್ಲ ಎಂದು ಮೂಲಗಳು ವರದಿ ಮಾಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!