Monday, March 27, 2023

Latest Posts

ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ : 14 ಮಂದಿ ಸಜೀವದಹನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಾರ್ಖಂಡ್‌ನ ರಾಂಚಿಯಲ್ಲಿ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 14 ಮಂದಿ ಸಜೀವ ದಹನವಾಗಿದ್ದಾರೆ. ಧನ್‌ಬಾದ್‌ನ ಜೋರಾಘಟಕ್‌ನಲ್ಲಿರುವ 13 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿದೆ, 10 ಮಹಿಳೆಯರು, ಮೂವರು ಮಕ್ಕಳು ಸೇರಿದಂತೆ 14 ಮಂದಿ ಮೃತಪಟ್ಟಿದ್ದಾರೆ.

ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಅಗ್ನಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

ಪ್ರಧಾನಿ ಮೋದಿ ಮೃತರ ಕುಟುಂಬಕ್ಕೆ ಎರಡು ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!