ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಮೂವರು ಕಾರ್ಮಿಕರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದ ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ (Fire accident) ದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವ ಘಟನೆ ಸಂಭವಿಸಿದೆ.

ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಪರ್ಫ್ಯೂಮ್ ಕೆಮಿಕಲ್‌ ಸ್ಫೋಟಗೊಂಡ ಪರಿಣಾಮ ಆಕಸ್ಮಿಕ ಬೆಂಕಿಯಿಂದ ಪರ್ಫ್ಯೂಮ್ ಫ್ಯಾಕ್ಟರಿ ಹೊತ್ತಿ ಉರಿಯುತ್ತಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!