ದೆಹಲಿಯ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಬೆಂಕಿ ಅವಘಡ : ಸ್ಥಳಕ್ಕೆ 8 ಅಗ್ನಿಶಾಮಕ ವಾಹನ ದೌಡು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ದೆಹಲಿಯ ಕರವಾಲ್ ನಗರದಲ್ಲಿರುವ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಧಿಕಾರಿಯ ಪ್ರಕಾರ, ಇಂದು ಬೆಳಿಗ್ಗೆ 9.25ರ ಸುಮಾರಿಗೆ ಪೊಲೀಸರಿಗೆ ಮಾಹಿತಿ ದೊರೆಯಿತು. ತದನಂತರ ಸ್ಥಳಕ್ಕೆ 8 ಅಗ್ನಿಶಾಮಕ ವಾಹನಗಳು ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

ಈ ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!